ಕಲಬುರಗಿ : ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು,
ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು. ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರು. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರು. ಪಾವತಿಯಾಗಿದೆ.
Elon Musk: UNSCನಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇಲ್ಲದಿರುವುದು ವಿಪರ್ಯಾಸ: ಎಲಾನ್ ಮಸ್ಕ್
2-3 ದಿನದಲ್ಲಿ ರಾಜ್ಯದ ಉಳಿದ 11-12 ಲಕ್ಷ ಜನರಿಗೆ ಹಣ ಜಮೆ ಮಾಡಲಾಗುತ್ತದೆ ಎಂದರು. ಡಿ.ಬಿ.ಟಿ. ಹಣ ಪಾವತಿ ಸಂದರ್ಭದಲ್ಲಿ ಎದುರಿಸಲಾಗುತ್ತಿದ್ದು, ಆಧಾರ್, ಬ್ಯಾಂಕ್ ಲಿಂಕ್ ಅಪಡೇಟ್ ಕಾರ್ಯ ಶೇ.60ರಿಂದ 80ಕ್ಕೆ ಹೆಚ್ಚಿಸಿದ್ದರಿಂದ ಶೇ.80ರಷ್ಟು ಜನರಿಗೆ ಪರಿಹಾರ ಸಿಕ್ಕಿದೆ. ನಮ್ಮ ಗುರಿಯಂತೆ ಇನ್ನು ಕನಿಷ್ಠ ಶೇ.5ರಷ್ಟು ಅಪಡೇಟ್ ಕಾರ್ಯ ಮಾಡಬೇಕಿದೆ. ಮುಂದಿನ ಕಂತು ಪಾವತಿಯೊಳಗೆ ಈ ಸಮಸ್ಯೆ ಬಗೆಹರಿಸಬೇಕು. ಇದನ್ನು ಮಿಷನ್ ಮೋಡ್ ನಲ್ಲಿ ಮಾಡಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರಿಗೆ ಸಚಿವರು ನಿರ್ದೇಶನ ನೀಡಿದರು.