ಚೆನ್ನೈ:- ತಮಿಳುನಾನ ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, ಹಲವು ಗಂಭೀರ ಗಾಯಗೊಂಡಿದ್ದಾರೆ. ಸಾವಿನ ಅಂಕಿಅಂಶ ಇನೂ ಹೆಚ್ಚಾಗುವ ಸಾಧ್ಯತೆ ಇದೆ.
ಒನ್ ನೇಷನ್, ಒನ್ ಎಲೆಕ್ಷನ್ ಚುನಾವಣೆ ಮಸೂದೆಗೆ ಕೇಂದ್ರ ಸಂಪುಟ ಗ್ರೀನ್ಸಿಗ್ನಲ್!
ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ನೆಲ ಮಹಡಿಯಲ್ಲಿನ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಅದು ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ರಿಸೆಪ್ಷನ್ ಹಾಲ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.