ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಲ್ಲ ಎರಡಲ್ಲ ಬರೋಬ್ಬರಿ 700ಜನ ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ರವಾನೆಯಾಗಿದೆ. ವಿವಿಧ ಮಹಿಳಾ ಒಕ್ಕೂಟ, ಸಂಘಟನೆಗಳ 700ಜನ ಮಹಿಳೆಯರು ಪತ್ರ ಬರೆದಿದ್ದಾರೆ.ಹೆಚ್ ಡಿ ರೇವಣ್ಣರನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಮನವಿ ಮಾಡಿದ್ದಾರೆ.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಅಖಿಲ ಭಾರತ ಸ್ತ್ರೀ ವಾದಿ ಒಕ್ಕೂಟ, ವುಮೆನ್ ಓಅರ್ ಡೆಮಾಕ್ರಸಿ ಸೇರಿ ಹಲವು ಸಂಘಟನೆಗಳು ಒಗ್ಗೂಡಿ ಪತ್ರ ಬರೆದಿದೆ. ಕೂಡಲೇ ಪ್ರಜ್ವಲ್ ರೇವಣ್ಣ ಹಾಗೂ ಹೆಚ್ ಡಿ ರೇವಣ್ಣ ವಿರುದ್ಧ ಕ್ರಮಕ್ಕೆ ಮನವಿ ಮಾಡಿದೆ. ಸಂತ್ರಸ್ಥೆಯರಿಗೆ ರಕ್ಷಣೆ, ಕಾನೂನು ನೆರವು ಕೊಡಬೇಕು ಎಂದು ಮನವಿ ಮಾಡಿ 700 ಜನ ಮಹಿಳೆಯರು ಸಹಿ ಹಾಕಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.