ಸಂಡೂರು: ತಾಲೂಕಿನ ಹೊಸದರೋಜಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ.ದೇವರಾಜ ಅರಸು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಚರಿಸಲಾಯಿತು.
ಎಪ್ಪತ್ತೈದು ನೇ ಗಣರಾಜ್ಯೋತ್ಸವನ್ನು ಈ ಬಾರಿ ಆಚರಣೆಯನ್ನು ಮಾಡುತ್ತೀದ್ದೇವೆ.75ನೇ ಗಣರಾಜ್ಯೋತ್ಸವ ಆಚರಣೆಯ ಮಾಡಲು ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ದೇಶದ ವಿವಿಧ ಭಾಗಗಳಲ್ಲಿ ರಕ್ಷಣಾ ಪಡೆಗಳು ಪಿರೇಡ್ ಮಾಡುವ ಮೂಲಕ, ಶಾಲೆಗಳು, ಕಚೇರಿಗಳಲ್ಲಿ ಹಾಗೂ ಇಂತಹ ವಸತಿ ನಿಲಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಮಾರಂಭಗಳು ನಡೆಯುತ್ತವೆ. ಪ್ರತಿವರ್ಷ ನಮ್ಮ ದೇಶದಲ್ಲಿ ಇದೊಂದು ಮಹತ್ವದ ಸಂದರ್ಭವಾಗಿದೆ. ಇನ್ನು ನವದೆಹಲಿಯ ಕರ್ತವ್ಯ ಪಥದಲ್ಲಿ ರಕ್ಷಣಾ ಪಡೆಗಳು ಅತ್ಯಂತ ಭವ್ಯವಾದ ಪರೇಡ್ ಮೆರವಣಿಗೆಯನ್ನು ನಡೆಸುತ್ತವೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಸ್ಮರಿಸಲು ನಾಗರೀಕರೆಲ್ಲರೂ ಒಟ್ಟಾಗಿ ಸೇರುತ್ತಾರೆ ಎಂಬುದು ತಿಳಿಯಬೇಕಾಗಿದೆ ಎಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅತಿಥಿ ಭಾಗವಹಿಸಿದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಕೆ.ಹೇಮೇಶ್ವರ ಹೇಳಿದರು.
ನಾವೆಲ್ಲ ಉನ್ನತ ಸ್ಥಾನದಲ್ಲಿ ಬಾಳಲು ನಮಗೆ ಸಿಕ್ಕಂತ ಅವಕಾಶಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಪ್ರತಿಯೊಬ್ಬರೂ ಇದನ್ನು ಅರಿತು ನಡೆಯಬೇಕು. ನಮಗೆ ಕೊಟ್ಟಂತಹ ಸಂವಿಧಾನದ ವಿಧಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ವಸತಿ ನಿಲಯದ ಅಡುಗೆ ಸಹಾಯಕರಾದ ಶ್ರೀ ಮತಿ ರತ್ನಮ್ಮ ಹೇಳಿದರು.
