ಧಾರವಾಡ: ಧಾರವಾಡದಲ್ಲಿ ಇಂದು ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ದಿನವನ್ನು ಅದ್ದೂರಿಯಿಂದ ಆಚರಣೆ ಮಾಡಲಾಯಿತು. ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ತಿರಂಗಾ ರಾರಾಜಿಸಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸಚಿವರು ಪೊಲೀಸರಿಂದ ತೆರೆದ ವಾಹನದ ಮೂಲಕ ಗೌರವ ವಂದನೆ ಸ್ವೀಕರಿಸಿದರು. ಸಚಿವರಿಗೆ ಪ್ರಭಾರ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅವರು ಸಾಥ್ ನೀಡಿದರು. ಧ್ವಜಾರೋಹಣದ ನಂತರ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡದ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.