ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಗಣರಾಜೋತ್ಸವ ಸಂಭ್ರಮ ಜೋರಾಗಿದೆ. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ಮಾಡಿದರು.
ಗಣರಾಜೋತ್ಸವದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆಯಿತು. ಇದೇ ಮೊದಲ ಬಾರಿಗೆ ಪೌರಕಾರ್ಮಿಕ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಚನ್ನಬಸಪ್ಪ, ಡಿಎಸ್ ಅರುಣ್ ಡಿಸಿ, ಎಸ್ಪಿ ಸೇರಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.
76ನೇ ಗಣರಾಜ್ಯೋತ್ಸವ ಆಚರಣೆ ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವರು
ಇದೇ ವೇಳೆ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಸಾರು ರಾಷ್ಟ್ರ ನಮ್ಮದು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರ್ವರಿಗೂ ಸಮಪಾಲು ಸರ್ವರಿಗೂಸಮಬಾಳು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹೊಸ ಜನಪರ ಯೋಜನೆಗಳ ಮೂಲಕ ಶಿಕ್ಷಣ ಆರೋಗ್ಯ ಕೃಷಿ ಕ್ಷೇತ್ರದ ಅಭಿವೃದ್ದಿಗೆ ಗಮನಹಿಸಿದೆ. ಸರ್ಕಾರದ ಪಂಚ ಗ್ಯಾರಂಟಿ ಮೂಲಕ ರಾಜ್ಯದ ಲಕ್ಷಾಂತರ ಫಲಾನುಭವಿಗಳಿಗ ಸೌಲಭ್ಯ ನೀಡಿದೆ. ಅಲ್ಲಮಪ್ರಭು ಮೈಧಾನದ ಅಭಿವೃದ್ದಿಗೆ ಸರ್ಕಾರ ಐದು ಕೋಟಿ ಅನುದಾನ ನೀಡಿದೆ. ರಾಜ್ಯದಲ್ಲಿ 13,500 ಶಿಕ್ಷಕರ ನೇಮಕ ಮಾಡಲಾಗಿದೆ. ಸಮಗ್ರ ಶಿಕ್ಷಣಯೋಜನೆಯಡಿ ಎಲ್ಕೆಜಿಯಿಂದ ಪಿಯುಸಿವರೆಗೆ ಹತ್ತು ಪಬ್ಲಿಕ್ ಸ್ಕೂಲ್ ತೆರೆಯಲಾಗಿದೆಶರಾವತಿ ಮುಳುಗಡೆ ಸಂತ್ರಸ್ತ್ರರ ಸಮಸ್ಯೆ ಬಗ್ಗೆ ಗಮನ ಹರಿಸಲಾಗಿದೆ ಎಂದರು.