ನವದೆಹಲಿ:- 76ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ತಂಗಿ ಮೇಲಿನ ಕೋಪಕ್ಕೆ ಹೆತ್ತ ಕರುಳಿನ ಕುಡಿಯನ್ನೇ ತಾರಸಿಯಿಂದ ಎಸೆದ ಮಹಿಳೆ!
76ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರಿಯಾಗಿ ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭಾಗವಹಿಸಿದ್ದರು. ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ರಕ್ಷಣ ಸಚಿವ ರಾಜನಾಥ್ ಸಿಂಗ್ ಸೇರಿ ಇತರೆ ಗಣ್ಯರು ಭಾಗವಹಿಸಿದ್ದರು.
ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅಕ್ಟೋಬರ್ 2024ರಲ್ಲಿ ಸುಬಿಯಾಂಟೊ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. 10,000 ಗಣ್ಯರು ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದ ಗಣ್ಯರ ಮೇಲೆ ವಾಯು ಸೇನೆಯಿಂದ ಪುಷ್ಪಾರ್ಚನೆ ಮಾಡಲಾಯಿತು. ಕರ್ತವ್ಯ ಪಥದಲ್ಲಿ 5 ಸಾವಿರ ಕಲಾವಿದವರು ಭಾಗವಹಿಸಿದ್ದು ಕಲಾ ಪ್ರದರ್ಶನ ಮಾಡಿದರು.