ಧಾರವಾಡ: ಕಳೆದ ದಿನ ತಡ ರಾತ್ರಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಇಸ್ಪೀಟ್ ದಾಳೆಯ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಉಳಿದ ಆರೋಪಿಗಳಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಹೇಳಿದರು.
ನಗರದ ಎಸ್ಪಿ ಕಚೇರಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್ ಒಳಗೆ ಇಸ್ಪೀಟ್ ಆಡುತ್ತಿರುವ ಕುರಿತು, ನಮ್ಮ ಗ್ರಾಮೀಣ ಠಾಣೆಗೆ ಮಾಹಿತಿ ಬಂದಿದೆ. ಅದನ್ನು ಆಧರಿಸಿ ಠಾಣೆಯ ಪಿಎಸ್ಐ, ಹಾಗೂ ಇಬ್ಬರು ಸಿಬ್ಬಂದಿಗಳು ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ ಜೂಜುಕೋರರು ಪೊಲೀಸರ ಮೇಲೆ ಹಲ್ಲೆ ಮಾಡಿದರು. ಅದರ ಕುರಿತು ಈಗ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಒಟ್ಟು 27 ಪ್ರಕರಣದಲ್ಲಿ 236 ಜನರನ್ನು ಬಂಧನ ಮಾಡಲಾಗಿದೆ. 3ಲಕ್ಷದಾ 38 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.