ಇಂದು ಮುಂಜಾನೆ ಅಮೆರಿಕದ ಇಲಿನಾಯ್ಸ್ ನ ಚಿಕಾಗೋದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕಾಗೋ ಪೊಲೀಸ್ ಇಲಾಖೆಯ ಪ್ರಕಾರ, ಐದು ವಯಸ್ಕರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಜನರ ಮೇಲೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಶೂಟರ್ ಅನ್ನು ಭದ್ರತಾ ಪಡೆಗಳು ಹಿಡಿದಿವೆಯೇ ಎಂಬುದು ತಿಳಿದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)