ಬೆಂಗಳೂರು: ಚಿನ್ನ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಐಶ್ವರ್ಯಾ ಗೌಡ ಹಾಗೂ ಪತಿ ಹರೀಶ್ಗೆ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ದೊರಕಿದೆ. ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠದ ಆದೇಶ ಹೊರಡಿಸಿದ್ದು,
ಐಶ್ವರ್ಯಾ ಹಾಗೂ ಪತಿ ಹರೀಶ್ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿತು. ಅದರಂತೆ ಮೊನ್ನೆ ರಾತ್ರಿಯೇ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಬಿಡುಗಡೆಯಾಗಿ ಹೊರಗೆ ಬಂದಿದ್ದಾರೆ. ಇದೀಗ ಮತ್ತೊಂದು ಪ್ರಕರಣ ಐಶ್ವರ್ಯ ವಿರುದ್ಧ ಆರ್ ಆರ್ ನಗರದಲ್ಲಿ ದಾಖಲಾಗಿದೆ.
ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ!
ಅದರಂತೆ ನಿನ್ನೆ ಆರ್ಆರ್ ನಗರ ಪೊಲೀಸರು ದಾಳಿ ನಡೆಸಿ, ಐಶ್ವರ್ಯ ಗೌಡ ಪತಿ ಹರೀಶ್ ಹೆಸರಲ್ಲಿರುವ ಕೋಟ್ಯಂತರ ಬೆಲೆಬಾಳುವ 3 ಐಷಾರಾಮಿ ಕಾರುಗಳನ್ನು ಸೀಜ್ ಮಾಡಿದ್ದಾರೆ. ಆಡಿ, ಬಿಎಂಡ್ಬ್ಲೂ, ಹಾಗೂ ಫಾರ್ಚೂನರ್,ಕಾರುಗಳು… 100ಗ್ರಾಂ ಚಿನ್ನ, 28 ಕೆ.ಜಿ ಬೆಳ್ಳಿ ಸೇರಿ ಕೆಲ ದಾಖಲೆಗಳು ಸೀಜ್ ಆಗಿವೆ.
ಡಿಕೆ ಸುರೇಶ್ ಅವರ ಸಹೋದರಿಯೆಂದು ನಂಬಿಸಿ ಖರೀದಿ ನೆಪದಲ್ಲಿ 9.82 ಕೋಟಿ ರೂ. ಮೌಲ್ಯದ ಚಿನ್ನವನ್ನು ಪಡೆದು ವಂಚಿಸಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್ ಐತಾಳ್ ಎಂಬುವವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆಎನ್ ಹಾಗೂ ಕನ್ನಡದ ನಟ ಧರ್ಮೇಂದ್ರ ಬಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.