ಬೆಳಗಾವಿ:- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಮನೆಗೆ ನುಗ್ಗಿ ದುಷ್ಕರ್ಮಿಗಳು 9 ತಿಂಗಳ ತುಂಬು ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿಹತ್ಯೆ ಮಾಡಿರವ ಘಟನೆ ಜರುಗಿದೆ.
Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 27ರ ವರೆಗೆ ಭರ್ಜರಿ ಮಳೆ!
ಮಠಮತಿ ಮೃತ ಮಹಿಳೆ. ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು. ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು.
ಆದರೆ, ಶನಿವಾರ ಮನೆಯಲ್ಲಿ ಯಾರು ಇಲ್ಲದ ಸಂಧರ್ಭದಲ್ಲಿ ಹರಿತ ಆಯುಧಿಂದ ಸುವರ್ಣ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಮಹಿಳೆಯ ಪತಿ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೋಟದಿಂದ ಮೇವು ತಂದ ಪತಿಯು ತನ್ನ ಪತ್ನಿಯನ್ನು ಕರೆದರೂ ಮನೆಯಿಂದ ಹೊರಗೆ ಬಂದಿಲ್ಲ. ಆಗ ಸಮೀಪ ಬಂದು ನೋಡಿದಾಗ ಗರ್ಭಿಣಿಯು ರಕ್ತದ ಮಡಿಲಿನಲ್ಲಿ ಬಿದ್ದು ನರಳಾಡುತ್ತಿರುವುದು ಕಂಡುಬಂದಿದೆ.
ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡ ಮಹಿಳೆ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೊಲೆ ಆರೋಪಿಗಳು ಯಾರು? ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.