ಮೈಸೂರು:- 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ ಘಟನೆ ಮೈಸೂರಿನಲ್ಲಿ ಜರುಗಿದೆ. ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ನಡೆದ ದಾಳಿ ವೇಳೆ ಸೀಜ್ ಮಾಡಲಾಗಿದೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ ಹಬ್ಬಕ್ಕೆ ವಾಯುವ್ಯ ಸಾರಿಗೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ!
ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಿದ್ದು, ಈ ಸಂಬಂಧ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆಯ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಅಬಕಾರಿ ಜಂಟಿ ಆಯುಕ್ತರು ಘಟಕಕ್ಕೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದಾಗ ಲೆಕ್ಕಪುಸ್ತಕದ ದಾಸ್ತಾನಿಗಿಂತ ಹೆಚ್ಚಿನ ಬಿಯರ್ ದಾಸ್ತಾನು ಕಂಡುಬಂದಿದೆ.