ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಸಂಚರಿಸಿದ್ದ ರಿಂದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಕರೀಮ್‍ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಈ ಬಾಲಕರೆಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದಾರೆ.
ಕರೀಮ್‍ನಗರದ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಇದರಿಂದಾಗಿ ಬಾಲಕನಿಗೆ ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲ ಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್‍ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ. ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು, ಅಲ್ಲೆ ಫುಟ್‍ಪಾತ್‍ನಲ್ಲಿ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದೆ. ಘಟನೆಯಿಂದ 14 ವರ್ಷದ ಹುಡುಗಿ ಸೇರಿ 27-32 ವರ್ಷದೊ ಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
