ಕೋಲ್ಕತಾ;- ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ತನ್ನ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ ಅವರಿಗೆ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.
ವಿರಾಟ್ ಚೆನ್ನಾಗಿ ಆಡಿದ್ದೀರಿ.. 49 ರಿಂದ 50 ಕ್ಕೆ ಹೋಗಲು ನನಗೆ 365 ದಿನಗಳು ಬೇಕಾಯಿತು. ನೀವು 49 ರಿಂದ 50 ಕ್ಕೆ ಹೋಗಿ ಮುಂದಿನ ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ.ಅಭಿನಂದನೆಗಳು!!’ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ’ವಿರಾಟ್, ನಿಮ್ಮ ಉತ್ಸಾಹ ಮತ್ತು ಪ್ರದರ್ಶನಗಳಿಂದ ನೀವು ಹೃದಯಗಳನ್ನು ಗೆಲ್ಲುತ್ತಲೇ ಇರಿ. ನಿಮ್ಮ ಮುಂದೆ ಉತ್ತಮ ವರ್ಷವಿರಲಿ ಎಂದು ಹಾರೈಸುತ್ತೇನೆ’ ಎಂದು ಜನ್ಮದಿನದ ಶುಭಾಶಯಗಳನ್ನು ಕೋರಿದ್ದರು.