ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿದೆ.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ 5 ವಿಕೆಟ್ ಗಳ ನಷ್ಟಕ್ಕೆ 326 ರನ್ ಗಳ ಗುರಿ ನೀಡಿತ್ತು. ಇದನ್ನು ಬೆನ್ನಟ್ಟಿದ ಸೌತ್ ಆಫ್ರಿಕಾ ಬ್ಯಾಟರ್ ಗಳು ಭಾರತ ತಂಡದ ಬೌಲರ್ ಗಳ ದಾಳಿಗೆ ತತ್ತರಿಸಿ ಹೋಗಿದ್ದಾರೆ.
ಸೌತ್ ಆಫ್ರಿಕಾವನ್ನು 27 ಓವರ್ ಗಳಲ್ಲಿ (27.1) 10 ವಿಕೆಟ್ ಪಡೆದು ಕೇವಲ 83 ರನ್ ಗಳಿಗೆ ಆಲೌಟ್ ಮಾಡಿ ಭಾರತ ತಂಡ ಅಜಯ ಆಟ ಮುಂದುವರಿಸಿದೆ.