ಬೆಳಗಾವಿ: ಖಡೇ ಬಜಾರ್ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಲಕ್ಷಾಂತರ ರೂ. ಮೌಲ್ಯದ ಸೀರೆಕಳ್ಳತನ ಮಾಡಿ ಎಸ್ಕೇಪ್ ಆಗಿರುವ ಘಟನೆ ನೀಡಿದಿದೆ. 2 ಲಕ್ಷ ಮೌಲದ್ಯ 8 ಕಾಂಚೀಪುರಂ ಸೀರೆ, 1 ಇಳಕಲ್ ಹಾಗೂ ರೇಷ್ಮೆ ಸೀರೆಗಳನ್ನು ಕಳ್ಳರು ಕದ್ದು ಎಸ್ಕೇಪ್ ಆಗಿದ್ದಾರೆ. ಈ ಗ್ಯಾಂಗ್ನಲ್ಲಿ 6 ಜನ ಮಹಿಳೆಯರು ಹಾಗೂ ಓರ್ವ ಪುರುಷ ಇದ್ದಾನೆ. ಸೀರೆ ಕಳ್ಳತನ ಮಾಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಔಷಧಿಗಳಿಲ್ಲದೆ ಆರೋಗ್ಯ ಚಿಕಿತ್ಸೆ: ಸುಪ್ರೀಂ ರೇ ಹೀಲಿಂಗ್ ಸೆಂಟರ್ : ಇಲ್ಲಿದೆ ಉಚಿತ ಸಲಹೆ – Reiki
ಒಬ್ಬರಿಗೆ ಒಬ್ಬರು ಪರಿಚಯ ಇಲ್ಲದೇ ಇರುವ ರೀತಿಯಲ್ಲಿ ಅಂಗಡಿಗೆ ಎಂಟ್ರಿ ಕೊಟ್ಟ ಕಿಲಾಡಿಗಳು ಲಕ್ಷಾಂತರ ರೂ. ಮೌಲ್ಯದ ಸೀರೆ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಮಹಿಳೆಯರು ತೆಲುಗು ಹಾಗೂ ತಮಿಳಿನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಪ್ರಕರಣವು ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.