ಬೆಂಗಳೂರು: ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕೆಲಸ ಮಾಡ್ತಿದ್ದ ಕಿರಣ್ಗೆ ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಮಾ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಿರಣ್ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.
ಇದಲ್ಲದೆ, ಕೆಲ ದಿನಗಳ ಹಿಂದೆ ಕಿರಣ್ ಒಂದು ಅಕ್ಸಿಡೆಂಟ್ ಮಾಡಿದ್ದ. ಅದಕ್ಕೆ ಪ್ರತಿಮಾ ಬೈದಿದ್ದರು. ಇವೆಲ್ಲದರ ಕೋಪದಿಂದ ಆತನನ್ನು ಕೆಲಸದಿಂದ ವಜಾ ಮಾಡಿದ್ದರು. ಕೆಲಸದಿಂದ ಕಿತ್ತೆಸದ ಬಳಿಕ ಕಿರಣ್ ಪ್ರತಿಮಾ ಮನೆಗೆ ಬಂದಿದ್ದಾನೆ. ಆಕೆಯ ಕಾಲಿಗೆ ಕೂಡ ಬಿದ್ದಿದ್ದಾನೆ. ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದಂಬಾಲು ಬಿದ್ದಿದ್ದಾನೆ. ಆದರೆ ಪ್ರತಿಮಾ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ. ಹೀಗಾಗಿ ಕಿರಣ್ ಕೊಲೆ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ
ಚಾಲಕ ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಕಿರಣ್ ಕೂಡ ಪ್ರತಿಮಾ ಡ್ರೈವರ್ ಆಗಿ 5 ವರ್ಷದಿಂದ ಕೆಲಸ ಮಾಡುತ್ತಾ ಬಂದಿದ್ದಾನೆ. 10 ದಿನಗಳ ಹಿಂದೆ ಆತನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದಕ್ಕೆ ಕಿರಣ್ ಚಾಕುವಿನಿಂದ ಪ್ರತಿಮಾ ಕತ್ತು ಕೊಯ್ದಿದ್ದಾನೆ. ಚಾಮರಾಜನಗರದಲ್ಲಿ ಆರೋಪಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಹೆಚ್ಚಿನ ತನಿಖೆಗೆ ನಡೆಯುತ್ತಿದೆ
ಇತ್ತ ಪ್ರತಿಮಾ ಮೊಬೈಲ್ ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯಪುರ ಪೊಲೀಸರು ಪರಿಶೀಲನೆಗೆ ನಡೆಸುತ್ತಿದ್ದಾರೆ. ಕೊಲೆಯಾದ ವೇಳೆ ಮನೆಯ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಆದರೆ ಫೋನ್ ಲಾಕ್ ಹಿನ್ನೆಲೆಯಲ್ಲಿ ಟೆಕ್ನಿಕಲ್ ಸೆಲ್ ಗೆ ರವಾನಿಸಿ ಲಾಕ್ ತೆಗೆದು ಪರಿಶೀಲಿಸುತ್ತಿದ್ದಾರೆ.