ಮಂಡ್ಯ: ಡಿ.ಕೆ.ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಆಗುವ ಅರ್ಹತೆ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಆಸೆ. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಬರಲು ಡಿ.ಕೆ.ಶಿವಕುಮಾರ್ ಕಾರಣ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂಬುದು ನನ್ನ ಆಸೆಯಾಗಿದೆ.
ಡಿ.ಕೆ.ಶಿವಕುಮಾರ್ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಪಕ್ಷವನ್ನು ಉಳಿಸಿ ಬೆಳೆಸಬೇಕೆಂಬ ಸಾಕಷ್ಟು ಇಚ್ಛಾಶಕ್ತಿ ಇದೆ. ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಿದರೇ ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗುತ್ತೆ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ.