ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಗಾಳಿ ಗುಣಮಟ್ಟ (Air Quality) ಕಳವಳಕಾರಿ ರೀತಿಯಲ್ಲಿ ಹದಗೆಟ್ಟಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಷ್ಟ್ರ ರಾಜಧಾನಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು (Primary Schools) ನವೆಂಬರ್ 10 ರವರೆಗೆ ಮುಚ್ಚುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ದೆಹಲಿ ಶಿಕ್ಷಣ ಸಚಿವೆ ಹಾಗೂ ಆಪ್ ನಾಯಕಿ ಅತಿಶಿ ಭಾನುವಾರ ಎಕ್ಸ್ನಲ್ಲಿ ಘೋಷಿಸಿದ್ದಾರೆ.
ಔಷಧಿಗಳಿಲ್ಲದೆ ಆರೋಗ್ಯ ಚಿಕಿತ್ಸೆ: ಸುಪ್ರೀಂ ರೇ ಹೀಲಿಂಗ್ ಸೆಂಟರ್ : ಇಲ್ಲಿದೆ ಉಚಿತ ಸಲಹೆ – Reiki
6 ರಿಂದ 12 ಗ್ರೇಡ್ನ ಶಾಲೆಗಳಿಗೆ ಆನ್ಲೈನ್ ತರಗತಿಗಳಿಗೆ ಬದಲಾಯಿಸುವ ಆಯ್ಕೆಯನ್ನು ನೀಡಲಾಗುತ್ತಿದೆ ಎಂದು ಅತಿಶಿ ತಿಳಿಸಿದ್ದಾರೆ. ಇದಕ್ಕೂ ಮೊದಲು ದೆಹಲಿ ಸರ್ಕಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 2 ರವರೆಗೆ ಮುಚ್ಚಲು ಆದೇಶಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ್ ಎಕ್ಸ್ನಲ್ಲಿ ಬರೆದಿದ್ದು, ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದರು