ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.
https://ainlivenews.com/are-all-those-in-the-congress-party-going-to-be-the-chief-minister/
ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ