ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗುವುದು ಖಚಿತ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ ಎಂದು ಕುಟುಕಿದ್ದಾರೆ.
ಹೈ ಬಿಪಿ, ಹೈ ಶುಗರ್ ಕಾರಣದಿಂದ ಡಿ.ಕೆ ಶಿವಕುಮಾರ್ ಜಾಮೀನು ಪಡೆದು ಹೊರಗಿದ್ದಾರೆ. ಆರೋಗ್ಯ ಸರಿಹೋದ ಬಳಿಕ ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ. ಆ ನಿಟ್ಟಿನಲ್ಲಿ ವಕೀಲರ ತಂಡ ದೆಹಲಿಗೆ ಹೋಗಿದೆ. ವಕೀಲರ ತಂಡ ಯಾವ ಫ್ಲೈಟ್ನಲ್ಲಿ ಹೋಗಿದ್ದಾರೆ ಎಂಬುದನ್ನು ಡಿಸಿಎಂ ಹೇಳಬೇಕು ಎಂದು ಯತ್ನಾಳ್ ಹೊಸ ಬಾಂಬ್ ಸಿಡಿದ್ದಾರೆ.