ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್ಗಳ ಮಿತಿಯಿತ್ತು. ಅದನ್ನು 40 ಯೂನಿಟ್ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ (Bhagya Jyoti Scheme), ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳನ್ನ ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ಕಾಲ ಹರಿಸಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಲು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್ ಅನ್ನು 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ನಿರ್ಧರಿಸಲಾಗಿದೆ.