ಬಹುಶಃ ‘ಎಲೆಕ್ಟ್ರಾನಿಕ್ ಸಿಟಿ’ (Electronic City) ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿವೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದೆ
ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ (R. Chikkanna) ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ. ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತದೆ? ಎಂಬ ಪ್ರಮುಖ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ.