ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ. ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.