ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಭಾರೀ (Rain) ಮಳೆಯ ಹಿನ್ನೆಲೆ ರಾಜ್ಯದ ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ 5 ಜಿಲ್ಲೆಗಳಲ್ಲಿ ಹಾಗೂ ನೀಲಗಿರಿಯ ಕೆಲವು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು ಅಡ್ಡೆರ್ಲಿ ನಡುವಿನ ಹಳಿಯ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದೆ. ಈ ಹಿನ್ನೆಲೆ ನೀಲಗಿರಿ ಬೆಟ್ಟದ ರೈಲ್ವೆ ವಿಭಾಗದಲ್ಲಿ 2 ರೈಲುಗಳನ್ನು ರದ್ದುಗೊಳಿಸಲಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಭಾರತದ ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕಣ್ಣೂರು ಜಿಲ್ಲೆಯಲ್ಲಿ ಬುಧವಾರ 7 ಸೆಂ.ಮೀ ಮಳೆ ದಾಖಲಾಗಿದೆ. ಐಎಂಡಿ ಪ್ರಕಾರ ಕೇರಳದಲ್ಲಿ ಮುಂದಿನ 2 ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡಿನಲ್ಲೂ ಮುಂದಿನ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.