ಬೆಂಗಳೂರು: ಟೀಂ ಇಂಡಿಯಾದ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ (Rohit Sharma) ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ನಲ್ಲಿ (World Cup Crciket) ವಿಶೇಷ ಸಾಧನೆ ಮಾಡಿದ್ದಾರೆ.
ಈ ವಿಶ್ವಕಪ್ನ ಪವರ್ ಪ್ಲೇನಲ್ಲಿ (Power Play) 250ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ. ಈ ಟೂರ್ನಿಯಲ್ಲಿ 2 ಅರ್ಧಶತಕ, ಒಂದು ಶತಕವನ್ನು ಹಿಟ್ಮ್ಯಾನ್ ಸಿಡಿಸಿದ್ದಾರೆ. ರೋಹಿತ್ ಬ್ಯಾಟಿನಿಂದ ಇಲ್ಲಿಯವರೆಗೆ 22 ಸಿಕ್ಸ್, 50 ಬೌಂಡರಿ ಸಿಡಿಯಲ್ಪಟ್ಟಿದೆ.
ಈ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರರ ಪೈಕಿ ರೋಹಿತ್ ಶರ್ಮಾ 5ನೇ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಒಟ್ಟು 8 ಪಂದ್ಯಗಳಿಂದ 442 ರನ್ ಹೊಡೆದಿದ್ದಾರೆ.
ನ್ಯೂಜಿಲೆಂಡ್ನ ರಚಿನ್ ರವೀಂದ್ರ (Rachin Ravindra) 565 ರನ್ ಹೊಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ 550 ರನ್ ಹೊಡೆಯುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.