ದೇಶದಲ್ಲಿ ಡೀಪ್ಫೇಕ್ (Deepfake) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರು ಡೀಪ್ಫೇಕ್ ವಿಡಿಯೋ ಸಂಚಲನ ಮೂಡಿಸಿತ್ತು. ಕತ್ರಿನಾ ಕೈಫ್ ಕೂಡ ಇದಕ್ಕೆ ತುತ್ತಾದರು. ಇದೀಗ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ (Sara Tendulkar) ಮತ್ತು ಕ್ರಿಕೆಟಿಗ (Cricket) ಶುಭಮನ್ ಗಿಲ್ (Shubman Gill) ಅವರ ಡೀಪ್ಫೇಕ್ ಫೋಟೋವೊಂದು ವೈರಲ್ ಆಗುತ್ತಿದೆ. ಇಬ್ಬರೂ ಜೊತೆಗಿರುವ ಫೋಟೋವನ್ನು ಡೀಪ್ಫೇಕ್ ಮಾಡಿ ಇಬ್ಬರೂ ಡೇಟ್ ಮಾಡುತ್ತಿದ್ದಾರೆ ಎಂದು ಸುದ್ದಿ ಹರಿಬಿಡಲಾಗುತ್ತಿದೆ.
ಶುಭಮನ್ ಮತ್ತು ಸಾರಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಇಬ್ಬರೂ ಬಹಿರಂಗವಾಗಿ ಈವರೆಗೂ ಆ ಕುರಿತು ಮಾತನಾಡಿಲ್ಲ. ಆದರೂ, ಅವರಿಬ್ಬರ ಜೊತೆಗಿನ ಫೋಟೋವನ್ನು ನಕಲು ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.