ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ ದೆಹಲಿಗೆ ಹೋಗಿ ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಅಂತಾನೂ ಕೇಳಿರಲಿಲ್ಲ 25 ಲೋಕಸಭಾ ಕ್ಷೇತ್ರ ಗೆಲ್ಲಬೇಕು ಅನ್ನೋದು ಸುಲಭದ ಮಾತಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.