ಬೆಂಗಳೂರು: ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ (B.Y Vijayendra) ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ.
ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದಿದ್ದಾರೆ.