ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉಡುಪಿ, ಕೋಟ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.