ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.
ರಾಜ್ಯಾಧ್ಯಕ್ಷ ಪಟ್ಟ: ನಿರ್ಮಲನಂದನಾಥ ಶ್ರೀ ಆಶೀರ್ವಾದ ಪಡೆದ BY ವಿಜಯೇಂದ್ರ
ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರಿನ ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯ ನಿರ್ವಹಿಸಲಿದ್ದಾರೆ.
ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್ಗಳನ್ನ ಮೀಸಲಿರಿಸಿದೆ. ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್ಗಳಲ್ಲಿ ಶೇಖರಿಸಿದೆ.