ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಟಂಟಂ ವಾಹನ (ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ ನರಸೀಪುರ ಮುಖ್ಯರಸ್ತೆಯ ಮೆಗಳಾಪುರ ಬಳಿ ಘಟನೆ ನಡೆದಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ದರ್ಶನ್ ಸೇರಿದಂತೆ ಕೆಲ ಯುವಕರು ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ದರ್ಶನ್ ಸಾವನ್ನಪ್ಪಿದ್ದು, ಸುಮಾರು 10 ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.