ಬಳ್ಳಾರಿ: ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಡ್ರಿಲ್ ಹೊಡೆದು ಮೊಳೆ ಹೊಡೆದ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಯುನೆಸ್ಕೋ ವಿಶ್ವ ಪರಂಪರೆಯ ಐತಿಹಾಸಿಕ ತಾಣ, 7ನೇ ಶತಮಾನದ ಶಿವನ ದೇವಾಲಯವಾಗಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷ ದೇವಾಲಯದ ಕಂಬಕ್ಕೆ ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ಈ ಸಂಬಂಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು ಸ್ಮಾರಕಗಳಿಗೆ ಧಕ್ಕೆ ಆಗಿದೆ ಎಂದು ನೋಟಿಸ್ ಜಾರಿ ಮಾಡಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ವಿರೂಪಾಕ್ಷೇಶ್ವರ ದೇಗುಲದ ಉತ್ತರ ದಿಕ್ಕಿನಲ್ಲಿ ಗೇಟ್ ಕೂರಿಸಲು ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ದೇಗುಲಕ್ಕೆ ಭಕ್ತರು ದಕ್ಷಿಣ ಧ್ರುವದಿಂದ ಬಂದು ದರ್ಶನದ ಬಳಿಕ ಉತ್ತರ ಧ್ರುವದಿಂದ ಹೊರ ಹೋಗುತ್ತಾರೆ. ಭಕ್ತರು ಸರತಿ ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಲು ಮೊಳೆ ಹೊಡೆಯಲಾಗಿದೆ. ಆದರೆ ಮೊಳೆ ಹೊಡೆಯುವ ವೇಳೆ ಪುರಾತತ್ವ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಅನುಮತಿ ಪಡೆಯದೇ ಮೊಳೆ ಹೊಡೆದಿದ್ದಕ್ಕೆ ಪುರಾತತ್ವ ಇಲಾಖೆ ಗರಂ ಆಗಿದೆ. ಸ್ಮಾರಕಗಳಿಗೆ ಧಕ್ಕೆ ಆಗಿದೆ ಎಂದು ನೋಟಿಸ್ ನೀಡಿದೆ.