ಬೆಂಗಳೂರು: ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು.
ದೀಪಾವಳಿ ಹಬ್ಬದ ಹಿನ್ನೆಲೆ : ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ
ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ 10 ಲಕ್ಷ ಮಹಿಳೆಯರಿಗೆ ಸಿಕ್ಕಿಲ್ಲ. ರಾಜ್ಯದಲ್ಲೇ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.