ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ. ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್ನಲ್ಲಿ (X) ಬರೆದುಕೊಂಡಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.