ಬೆಂಗಳೂರು: ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು
ಆ ನಂತರ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು. ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ..?. ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ?. ಅವರೇನು ಫಲಾನುಭವಿನಾ..?. ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ. ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು. ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ. ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ. 5% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ ಎಂದರು.
ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ. ಬಡವರು, ಹೆಣ್ಣುಮಕ್ಕಳ ನೋವು ಗೊತ್ತಿಲ್ಲ. ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ. ದಸರಾಗೆ ಬಂದಿದ್ದ ಜನರು ನೋಡಿದ್ರೆ ಗೋತ್ತಾಗುತ್ತೆ. ಕುಮಾರಸ್ವಾಮಿ ಬಹಳ ಅಜೆರ್ಂಟ್ ಅಲ್ಲಿ ಇದ್ದಾರೆ. ಸುಮ್ಮನೆ ಸಚಿವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿಜಯೇಂದ್ರ ಬಿಜೆಪಿ ರಾಜ್ಯಧ್ಯಕ್ಷರಾಗಿದ್ದಾರೆ. ವಿಜಯೇಂದ್ರಗೆ ಒಳ್ಳೆಯದಾಗಲಿ ಹಾಗೆಯೇ ಕುಮಾರಸ್ವಾಮಿಗೂ ಒಳ್ಳೆಯದಾಗಲಿ ಎಂದು ಹೇಳಿದರು.
ತೆಲಂಗಾಣ ಚುನಾವಣೆಯಲ್ಲಿ ಆರು ಭರವಸೆ ನೀಡಿದ್ದೇವೆ. ಈ ಬಾರಿ ಕಾಂಗ್ರೆಸ್ಸಿಗೆ ಅಧಿಕಾರ ನೀಡಬೇಕು. ತೆಲಂಗಾಣ ಜನರು ತೀರ್ಮಾನ ಮಾಡಿದ್ದಾರೆ. ಡಿಸೆಂಬರ್ 9 ತೆಲಂಗಾಣ ರಾಜ್ಯ ನಿರ್ಮಾನವಾದ ದಿನ. ಸೋನಿಯಾ ಗಾಂಧಿ ರಾಜ್ಯ ನಿರ್ಮಾಣ ಮಾಡಿದರು. ಅವತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ತಿಳಿಸಿದರು.