ಬೆಂಗಳೂರು: ಸಾಲದಿಂದ ದೇಶ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರ ‘ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗೆ ಇಲ್ಲವೆಂದು ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
DKS Vs HDK: ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ಸಾಲ ಮಾಡಿದ್ದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ 2 ಲಕ್ಷ 45 ಸಾವಿರ ಕೋಟಿ ಸಾಲ ಮಾಡಿತ್ತು. ಈಗ 5 ಲಕ್ಷ 71 ಸಾವಿರ ಕೋಟಿಗೂ ಅಧಿಕ ಸಾಲ ಇದೆ. ನಿಮಗೆ ಪ್ರಧಾನಿ ಮೋದಿ ಬಗ್ಗೆ ಮಾತಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.