ಬೆಂಗಳೂರು:- ದೇವನಹಳ್ಳಿವರೆಗೂ ಮೆಟ್ರೋ ವಿಸ್ತರಣೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪಟ್ಟಣಕ್ಕೆ ಮೆಟ್ರೋ ರೈಲು ಮತ್ತು ಕಾವೇರಿ ನೀರು ಒದಗಿಸಲು ಪ್ರಯತ್ನ ಮಾಡುತ್ತೇನೆ. ಸರ್ಕಾರದ ಹಂತದಲ್ಲೂ ಚರ್ಚೆ ಮಾಡಿದ್ದೇನೆ’ ಎಂದರು.
ದೇವನಹಳ್ಳಿ ಜಿಲ್ಲಾ ಕೇಂದ್ರ ಸಂಬಂಧ ಮುಖ್ಯಮಂತ್ರಿ, ಡಿಸಿಎಂ ಮತ್ತು ಕಂದಾಯ ಸಚಿವರೊಂದಿಗೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.
ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ದೇವನಹಳ್ಳಿ ಬೀರಸಂದ್ರದ ಬಳಿ ಜಿಲ್ಲಾಡಳಿತ ಭವನ ನಿರ್ಮಿಸಿ, ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಸ್ಥಳಾಂತರ ಮಾಡಿಸಿದ್ದಾರೆ. ಅವರ ಜೊತೆಗೆ ಈ ಕುರಿತು ಮಹತ್ವದ ಸಭೆ ನಡೆಸಿ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.
‘ನಾನು ನ್ಯಾಯವಾದಿಯಾಗಿದ್ದಾಗ ಅಂದಿನ ವಕೀಲರ ಪ್ರಯತ್ನದಿಂದ ರಾಜಕೀಯಕ್ಕೆ ಪಾದರ್ಪಣೆ ಮಾಡಿದೆ’ ಎಂದು ರಾಜಕೀಯ ಪ್ರವೇಶದ ದಿನವನ್ನು ಮೆಲಕು ಹಾಕಿದರು.
ನ್ಯಾಯಾಲಯ ಸಂಕೀರ್ಣ ಸ್ಥಾಪನೆಗೆ ಇರುವ ತೊಡಕು ನಿವಾರಿಸಿಕೊಂಡರೇ ₹15 ಲಕ್ಷ ಅನುದಾನವನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ, ಸಿಎಸ್ಆರ್ ನಿಧಿಯಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಮಾಡಲಾಗುತ್ತಿದೆ. ಇದರಿಂದಾಗಿ ಭವಿಷ್ಯದಲ್ಲಿ ಮಕ್ಕಳು ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.