ಬೆಂಗಳೂರು: ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಪಟಾಕಿಯಿಂದ ಉಂಟಾಗುವ ಮಾಲಿನ್ಯದ ಕುರಿತು ಸಿಎಂ ಎಚ್ಚರಿಕೆ ನೀಡಿದ್ದು ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಸಿಎಂ, ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ. ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.