ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕೇಂದ್ರ ಸಚಿವ ಭಗವಂತ ಖೂಬಾ ಅವರು ಭೇಟಿ ಆಗಿದ್ದಾರೆ.
ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕೆ ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಬರುವ ಲೋಕಸಭೆ ಚುನಾವಣೆ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು. ‘ನಿಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರಿಂದ ಸಂಘಟನೆ ಕಲೆ ಕರಗತವಾಗಿದೆ. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ನಿಮ್ಮಲ್ಲಿದೆ. ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡುವಂತಾಗಲಿ’ ಎಂದು ಶುಭ ಹಾರೈಸಿದರು.