ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದು ನಡೆದ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದೆ.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ದ್ವಿಶತಕ ಜೊತೆಯಾಟ ಹಾಗೂ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 50 ಓವರ್ಗಳಲ್ಲಿ 410 ರನ್ ಗಳಿಸಿ ಎದುರಾಳಿ ನೆದರ್ಲೆಂಡ್ಸ್ ತಂಡಕ್ಕೆ 410 ರನ್ಗಳ ಗುರಿ ನೀಡಿತ್ತು.
ಇದನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡವು ಭಾರತ ತಂಡದ ಬೌಲರ್ ಗಳ ದಾಳಿಗೆ ತತ್ತರಿಸಿ ಹೋಗಿತ್ತು. ಕೇವಲ 47 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ 250 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಭಾರತ ತನ್ನ ಗೆಲುವಿನ ಓಟ ಮುಂದುವರಿಸಿದೆ.