ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್ಗೆ ನಡುಕ ಶುರುವಾಗಿದೆ ಎಂದು ಸಿ ಸಿ ಪಾಟೀಲ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು, ಸೂಕ್ತ ಸಂದರ್ಭದಲ್ಲಿ ಯೋಗ್ಯ ವ್ಯಕ್ತಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡುವ ಮುನ್ನವೇ ಕಾಂಗ್ರೆಸ್ಗೆ ನಡುಕ ಶುರುವಾಗಿದೆ ಎಂದು ಕುಟುಂಬ ರಾಜಕಾರಣದ ಬಗ್ಗೆ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸಿ ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಯನ್ನೂ ಕಾಂಗ್ರೆಸ್ ಟೀಕೆ ಮಾಡಿದೆ. ಆದರೆ ನಮ್ಮ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದೆ. ಕಾಂಗ್ರೆಸ್ಗೆ ವಿಜಯೇಂದ್ರ ಹೆಸರು ಘೋಷಣೆಯಿಂದ ನಡುಕ ಶುರುವಾಗಿದೆ. ಇನ್ನೂ ವಿಜಯೇಂದ್ರ ಅಧಿಕಾರ ಸ್ವೀಕರಿಸಿಲ್ಲ, ಆಗಲೇ ಕಾಂಗ್ರೆಸ್ಗೆ ನಡುಕ ಉಂಟಾಗಿದೆ. ಹೀಗಾಗಿ ಕುಟುಂಬ ರಾಜಕಾರಣ ಅಂತ ಕಾಂಗ್ರೆಸ್ ಆರೋಪಿಸುತ್ತಿದೆ ಎಂದು ಟಾಂಗ್ ನೀಡಿದ್ದಾರೆ.
ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಆಂತರಿಕ ವಿಚಾರವಾಗಿದೆ, ವಿಜಯೇಂದ್ರ ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಪಕ್ಷದ ಉಪಾಧ್ಯಕ್ಷ ಆಗಿದ್ದವರು, ಅವರಿಗೆ ಅವರು ಯಡಿಯೂರಪ್ಪ ಮಗ ಅಂತ ಹೆಮ್ಮೆ ಇದೆ ಎಂದು ವಿಜಯೇಂದ್ರ ಆಯ್ಕೆಯನ್ನು ಸಮರ್ಥಿಸಿಕೊಂಡರು.