ಬೆಂಗಳೂರು: ನಗರದಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ಪೈಕಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಪೆಟ್ಟು ಬಿದ್ದ ಕಾರಣ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನೂ, ನಾರಾಯಣ ನೇತ್ರಾಲಯದಲ್ಲಿ ಒಂದೇ ದಿನಕ್ಕೆ 22 ಪ್ರಕರಣ ಪೈಕಿ 10 ಮಂದಿ ಕಣ್ಣಿಗೆ ಗಾಯವಾಗಿದ್ದು 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆಮ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇವರಲ್ಲಿ ಇಬ್ಬರಿಗೆ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯ ಮೂಲಗಳು ಮಾಹಿತಿ ನೀಡಿದ್ದು, ಕಣ್ಣಿ ಚಿಕಿತ್ಸೆಗೆ ಬೇಕಾದ ಔಷಧ ಮತ್ತು ಶಸ್ತ್ರಚಿಕಿತ್ಸೆ ನಡೆಯುತ್ತಿದೆ.