ಬೆಂಗಳೂರು: ದೀಪಾವಳಿ ಹಬ್ಬ ಹಿನ್ನೆಲೆ ಪಟಾಕಿ ಅವಘಡ ಕೇಸ್ ಹೆಚ್ಚಳ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಮಾತನಾಡಿದ್ದು, ಗ್ರೀನ್ ಪಟಾಕಿ ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದೇವೆ. ಜನರೂ ಕೂಡ ನಮಗೆ ಸಹಕಾರ ನೀಡಬೇಕು. ಕೆಲವೆಡೆ ಪಟಾಕಿಯಿಂದ ಕಣ್ಣಿಗೆ ಗಾಯವಾಗಿರುವ ವರದಿ ಆಗಿದೆ. ಎಸಿಪಿಗಳ ಒಂದು ಟೀಂನಿಂದ ಎಲ್ಲಾ ಏರಿಯಾಗಳಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ!
ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ಪೈಕಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಪೆಟ್ಟು ಬಿದ್ದ ಕಾರಣ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನೂ, ನಾರಾಯಣ ನೇತ್ರಾಲಯದಲ್ಲಿ ಒಂದೇ ದಿನಕ್ಕೆ 22 ಪ್ರಕರಣ ಪೈಕಿ 10 ಮಂದಿ ಕಣ್ಣಿಗೆ ಗಾಯವಾಗಿದ್ದು 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆಮ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇವರಲ್ಲಿ ಇಬ್ಬರಿಗೆ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯ ಮೂಲಗಳು ಮಾಹಿತಿ ನೀಡಿದ್ದು, ಕಣ್ಣಿ ಚಿಕಿತ್ಸೆಗೆ ಬೇಕಾದ ಔಷಧ ಮತ್ತು ಶಸ್ತ್ರಚಿಕಿತ್ಸೆ ನಡೆಯುತ್ತಿದೆ.