ಬೆಂಗಳೂರು: ಶಾಸಕ ಬಿ ವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ ಮಾಜಿ ಮುಖ್ಯಮಂತ್ರಿ ಎಸ್ .ಎಂ. ಕೃಷ್ಣ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಕಳೆದ 20 ನಿಮಿಷದಿಂದ ಎಚ್.ಎಂ ಕೃಷ್ಣ ಜೊತೆ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿಯ ಕಾರ್ಯಕರ್ತರು ಕೂಡ ಭಾಗಿಯಾಗಿದ್ದರು.
ಎಸ್.ಎಂ ಕೃಷ್ಣ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಕೃಷ್ಣ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.