ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ.
ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದ್ರೂ ನಾನು ಕೆಲಸ ಮಾಡ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.