ಬೆಂಗಳೂರು: ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಎಲ್ಲರೂ ಗುರುತಿಸಿದ್ದಾರೆ: ಎಸ್ಎಂ ಕೃಷ್ಣ
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಕಿಡಿಕಾರಿರುವ ಅವರು; ಜನರು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಮಾರ್ಮಿಕವಾಗಿ ಚುಚ್ಚಿದ್ದಾರೆ.
ಡೂಪ್ಲಿಕೇಟ್ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಅವರು ಹೇಳಿದ್ದಾರೆ.