ಬೆಂಗಳೂರು:– ಜೆಡಿಎಸ್ ಮತ್ತು ಬಿಜೆಪಿ ಜತೆಯಾಗಿ ಲೋಕಸಭಾ ಚುನಾವಣೆ ಎದುರಿಸಲಿವೆ’ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರನ್ನು ಪುನರಾಯ್ಕೆ ಮಾಡುವುದಕ್ಕಾಗಿ ಬೆಂಬಲ ನೀಡುತ್ತಿದ್ದೇವೆ. ಈ ಕಾರಣಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಜತೆಯಾಗಿ ಲೋಕಸಭಾ ಚುನಾವಣೆ ಎದುರಿಸಲಿವೆ ಎಂದರು.
ಜಂಟಿ ಹೋರಾಟದಿಂದ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಹೆಚ್ಚಿನ ಲಾಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾವು ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುವುದರಿಂದ 22ರಿಂದ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದೊಳಗೆ ಅದನ್ನು ಬಗೆಹರಿಸಿಕೊಳ್ಳುತ್ತೇವೆ’ ಎಂದರು.
ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿರುವುದು ಉತ್ತಮ ಆಯ್ಕೆ. ಯುವ ಸಮೂಹದಲ್ಲಿ ಸಂಚಲನ ಸೃಷ್ಟಿಸಿರುವ ನಾಯಕನಿಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ಒಳ್ಳೆಯ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು.