ಬೆಳಗಾವಿ: ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಹೈಕಮಾಂಡ್ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿಳಿಸಿದರು. ನಗರದ ಕಾಂಗ್ರೆಸ್ (Congress) ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ.
ಎಲ್ಲಾ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ ಚರ್ಚಿಸಿದ ನಂತರ ಹೈಕಮಾಂಡ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.