ಬೆಳಗಾವಿ: ಉಡುಪಿ ಜಿಲ್ಲೆಯಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ. ಶೀಘ್ರದಲ್ಲೇ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು,
ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೋಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.